SatisHFactionKannada Podcast from the US

ಒಂದು ಬಿಂದುವಿನಿಂದ ಸಿಂಧುವಿನೆಡೆಗೆ...
ಒಂದು ಬಿಂದುವಿನಿಂದ ಸಿಂಧುವಿನೆಡೆಗೆ... ಬಿಂದು ಎಂದರೆ, ಹನಿ... ಅದೇ ಸಣ್ಣದು, ಗಾತ್ರದಲ್ಲಿ ಚಿಕ್ಕದಾದದ್ದು, ಸೂಕ್ಷ್ಮವಾದದ್ದು. ಆಕಾರದಲ್ಲಿ ಚಿಕ್ಕದಾಗಿದ್ದರೂ ದೊಡ್ಡ ಆಶೋತ್ತರಗಳನ್ನು ಹೊತ್ತಿಕೊಂಡಿರುವಂಥದು! ಈ ಅರಿವು ಮೂಡಿದ್ದು ಇತ್ತೀಚೆಗೆ, ನಾನು ಸಮುದ್ರದ ತಟದಲ್ಲಿ ನಿರಂತರವಾಗಿ ಕಾಲಿಗೆ ಬಂದು ರಾಚುತ್ತಿದ್ದ ಅಲೆಗಳ ಮಡಿಲಿನಿಂದ, ಬೊಗಸೆಯಲ್ಲಿ ನೀರನ್ನು ಮೊಗೆದು, ಸೂರ್ಯನಿಗಭಿಮುಖವಾಗಿ ವಿಸರ್ಜಿಸುತ್ತಿರುವಾಗ, ಕೊನೆಯಲ್ಲಿ ಉಳಿದ ಹನಿಗಳು ತಮ್ಮೊಳಗಿನ ಹೊಸದೊಂದು ಪ್ರಪಂಚವನ್ನೇ ತೋಡಿಕೊಂಡವು. ಅಬ್ಬಾ! ಈ ಒಂದೊಂದು ಹನಿಯೂ ತನ್ನೊಳಗೆ ಅಪಾರವಾದ ಸಾಗರವನ್ನೇ ಹೊತ್ತಿಕೊಂಡಿದೆಯಲ್ಲಾ!
Audio and video play straight from the show's own hosting. PodSubs stores and serves no media.
